ಬೆಂಗಳೂರು: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯ ಸರ್ಕಾರ ಸುವ್ಯವಸ್ಥಿತ ಲಸಿಕೆ ವಿತರಣೆಗೆ ಸಿದ್ಧತೆ ನಡೆಸಿದೆ.
ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದ್ದು, 2,73,211 ಸರ್ಕಾರಿ ಹಾಗೂ 3,57,313 ಖಾಸಗಿ ಸೇರಿ ಒಟ್ಟು 6,30,524 ಅರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಈವರೆಗೂ 64 ಬೃಹತ್ ಐಸ್ ಲೈನ್ಡ್ ರೆಫ್ರಿಜರೇಟರ್ (ILR), 24 ಲಕ್ಷ ಸಿರಿಂಜುಗಳು ರಾಜ್ಯಕ್ಕೆ ಬಂದಿದ್ದು ಜಿಲ್ಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ 31 ಲಕ್ಷ ಸಿರಿಂಜುಗಳು ಸೇರಿದಂತೆ ಹೆಚ್ಚುವರಿ ಉಪಕರಣಗಳು ಶೀಘ್ರದಲ್ಲೇ ತಲುಪಿಲಿವೆ ಎಂದು ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಈವರೆಗೂ 64 ಬೃಹತ್ ಐಸ್ ಲೈನ್ಡ್ ರೆಫ್ರಿಜರೇಟರ್ (ILR), 24 ಲಕ್ಷ ಸಿರಿಂಜುಗಳು ರಾಜ್ಯಕ್ಕೆ ಬಂದಿದ್ದು ಜಿಲ್ಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ 31 ಲಕ್ಷ ಸಿರಿಂಜುಗಳು ಸೇರಿದಂತೆ ಹೆಚ್ಚುವರಿ ಉಪಕರಣಗಳು ಶೀಘ್ರದಲ್ಲೇ ತಲುಪಿಲಿವೆ. (3/3)
— Dr Sudhakar K (Modi ka Parivar) (@DrSudhakar_) January 5, 2021
ಲಸಿಕೆ ನೀಡಲು ತರಬೇತಿ ಪಡೆದ 9,807 ಅನುಭವಿ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಮತ್ತು ರಾಜ್ಯಾದ್ಯಂತ 28,427 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇನ್ನೂ ಹೆಚ್ಚಿನ ಕೇಂದ್ರಗಳನ್ನು ಗುರುತಿಸಲಾಗುವುದು ಎಂದಿರುವ ಅವರು, ಈ ಎಲ್ಲಾ ದತ್ತಾಂಶವನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿರುವ CoWIN ತಂತ್ರಾಂಶದಲ್ಲಿ ನಮೂದಿಸಲಾಗಿದೆ ಎಂದು ತಿಳಿಸಿದ್ದಾರೆ.
ಲಸಿಕೆ ನೀಡಲು ತರಬೇತಿ ಪಡೆದ 9,807 ಅನುಭವಿ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಮತ್ತು ರಾಜ್ಯಾದ್ಯಂತ 28,427 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇನ್ನೂ ಹೆಚ್ಚಿನ ಕೇಂದ್ರಗಳನ್ನು ಗುರುತಿಸಲಾಗುವುದು.
ಈ ಎಲ್ಲಾ ದತ್ತಾಂಶವನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿರುವ CoWIN ತಂತ್ರಾಂಶದಲ್ಲಿ ನಮೂದಿಸಲಾಗಿದೆ. (2/3)@DHFWKA
— Dr Sudhakar K (Modi ka Parivar) (@DrSudhakar_) January 5, 2021