ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಎಂ.ಎನ್. ನಂದೀಶ್ ಹಂಚೆ ಹಾಗು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಭಾಗವಹಿಸಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಮತ್ತು ಸಹಾಯಕ ನಿರ್ದೇಶಕಿ ಸೌಭಾಗ್ಯ ಉಪಸ್ಥಿತರಿದ್ದರು. ಡಾ. ಹೆಚ್.ಕೆ. ಲಕ್ಷ್ಮಿನಾರಾಯಣ ಅಡಿಗ, ಡಾ. ಬಸವರಾಜ ಕಲ್ಗುಡಿ, ಡಾ. ಎಂ.ಎಂ. ಪಡಶೆಟ್ಟಿ, ಕೆ. ರಾಜಕುಮಾರ್, ಸಪ್ನ ಬುಕ್ಹೌಸ್ ಮಾಲಿಕರಾದ ನಿತಿನ್ ಷಾ, ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ, ಎ. ಗಣೇಶ್, ಸುಶೀಲಾ ಸೋಮಶೇಖರ್, ಕಿರಣ್ ಮಾಡಾಳು, ಪುಂಡಲೀಕ ಕಲ್ಲಿಗನೂರು, ಕಲ್ಲೂರು ನಾಗೇಶ್ ಪ್ರಶಸ್ತಿ ಸ್ವೀಕರಿಸಿದರು.
© 2020 Udaya News – Powered by RajasDigital.