ಬೆಂಗಳೂರು: ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು.
ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ ಮತ್ತು ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವರು, ರೈತರಿಗೆ ಭರವಸೆ ನೀಡಿದರು.
ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಮಹದಾಯಿ ಹೋರಾಟ ಸಮಿತಿಯ ಅಧ್ಯಕ್ಷ ದ್ಯಾಮಪ್ಪಯ್ಯ ಸೇರಿದಂತೆ ಅನೇಕ ರೈತ ಮುಖಂಡರು ಈ ನಿಯೋಗದಲ್ಲಿದ್ದರು.