ದೆಹಲಿ: ಕೃಷಿ ಕಾಯ್ದೆ ವಿರುದ್ಧದ ಹೋರಾಟ ಸಂದರ್ಭದಲ್ಲಿ ಹಿಂಸಾಚಾರ ನಡೆಸಿದವರ ಪತ್ತೆಗೆ ದೆಹಲಿ ಪೊಲೀಸರು ವ್ಯೂಹ ರಚಿಸಿದ್ದಾರೆ.
ಗಣರಾಜ್ಯದಿನದಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರ ಘಟನೆಯನ್ನು ಸವಾಲಾಗಿ ಸ್ವೀಕರಿಸಿರುವ ಸರ್ಕಾರ ಸಮರ್ಪಕ ತನಿಖೆಗೆ ಆದೇಶಿಸಿದ್ದು ಈಗಾಗಲೇ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ನಡುವೆ, ಕೆಂಪುಕೋಟೆ ಬಳಿಯ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ಪೈಕಿ ಸುಮಾರು 200 ಮಂದಿಯ ಫೋಟೊಗಳನ್ನು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ವಿಡಿಯೋಗಳಿಂದ ಫೋಟೋಗಳನ್ನು ಸಂಗ್ರಹಿಸಿ ಪ್ರಕಟಿಸಲಾಗಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.