ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶೂಲಗಿರಿ ನಗರದಲ್ಲಿ ಇಂದು ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಂಸದ ಚೆಲ್ಲಕುಮಾರ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಮೊದಲಾದ ಗಣ್ಯರು ಭಾಗವಹಿಸಿದ್ದರು.
ಶ್ರೀ ಕನಕದಾಸರ ಜಯಂತಿಯಲ್ಲಿ ಭಾಗವಹಿಸಲು ತಮಿಳುನಾಡಿನ ಹೊಸೂರಿಗೆ ಆಗಮಿಸಿದಾಗ ಅಭಿಮಾನಿಗಳು ಸಿದ್ದರಾಮಯ್ಯ ಅವರಿಗೆ ಭವ್ಯ ಸ್ವಾಗತ ಕೋರಿದರು. ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಸ್ವಾಗತ ಕೋರಿದ ಸನ್ನಿವೇಶ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಯಿತು.