ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಕಾಂಗ್ರೆಸ್ ಹೋರಾಟ ಮುಂದುವರಿದಿದೆ. ಉಡುಪಿಯಲ್ಲಿ ಶತಮೈಲು ನಡಿಗೆ ಗಮನ ಸೆಳೆದಿದೆ.
ಕೇಂದ್ರ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹೆಜಮಾಡಿಯಿಂದ ಬೈಂದೂರು ವರೆಗೆ ಹಮ್ಮಿಕೊಂಡಿರುವ 108 ಕಿ.ಮೀ. ದೂರದ ಪಾದಯಾತ್ರೆಯನ್ನು ಕೈಗೊಂಡಿದೆ. ಈ ಪಾದಯತ್ರೆಯನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು.
ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಯು.ಟಿ. ಖಾದರ್, ಪ್ರಮೋದ್ ಮಧ್ವರಾಜ್, ಸಂಸದ ನಾಸೀರ್ ಹುಸೇನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮೊದಲಾದವರು ಭಾಗವಹಿಸಿದ್ದರು.