ಹಿರೇನಾಗವಲ್ಲಿಸೋಟ ಪ್ರಕರಣ.. ಘಟನೆ ಅತ್ಯಂತ ದುರದೃಷ್ಟಕರ ಎಂದ ಗಣಿ ಸಚಿವ ಮುರುಗೇಶ್ ನಿರಾಣಿ.. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಖಚಿತ ಎಂದ ಸಚಿವರು..
ದೆಹಲಿ:ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸೋಟಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಗಣಿ ಮತ್ತು ಭೂವಿಜಾನ ಸಚಿವ ಮುರುಗೇಶ್.ಆರ್ ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ.
ಶಿವಮೊಗ್ಗ ಸೋಟದ ನಂತರ ಮತ್ತೊಂದು ದುರಂತ ನಡೆದಿರುವುದು ತನಗೆ ತೀವ್ರ ನೋವಾಗಿದೆ. ಜಿಲಿಟಿನ್ ಕಡ್ಡಿ ಸೋಟದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವು ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ ಎಂದು ಅಭಯ ನೀಡಿದ್ದಾರೆ.

ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತೆಗೆದುಕೊಳ್ಳಲಾಗುವುದು. ಸರ್ಕಾರ ಸಂಪೂರ್ಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಶಿವಮೊಗ್ಗ ಸೋಟಕ್ಕೆ ಮೊದಲೇ ಸೋಟಕಗಳನ್ನು ಸಂಗ್ರಹಿಸಿಡಲಾಗಿತ್ತೇ? ಎಂಬ ಬಗ್ಗೆ ನಾನು ಅಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಯಾರು ಎಷ್ಟೇ ಪ್ರಭಾವ ಬೀರಿದರೂ ಆರೋಪಿಗಳನ್ನು ರಕ್ಷಣೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕೆಲವು ಅಧಿಕೃತ ಕೆಲಸಗಳಿಂದಾಗಿ ನಾನು ದೆಹಲಿಯಲ್ಲಿದ್ದೇನೆ. ನಾನು ಇಂದು ಸಂಜೆ ಬೆಂಗಳೂರಿಗೆ ಬಂದಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್, ಡಿಸಿ, ಎಸ್ಪಿ ಮತ್ತು ನಮ್ಮ ಇಲಾಖೆ ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಭವಿಷ್ಯದಲ್ಲಿ ಇಂಥ ದುರಂತಗಳು ಮರುಕಳಿಸದಂತೆ ಎಚ್ಚರವಹಿಸಲು ನುರಿತ ಕೆಲಸಗಾರರಿಗೆ ತರಬೇತಿ ನೀಡುವುದು ಮತ್ತು ಗಣಿಗಾರಿಕೆ ಶಾಲೆಯ ರಚನೆಯ ಮಹತ್ವದ ಬಗ್ಗೆ ಸಚಿವ ನಿರಾಣಿ ಪುನರುಚ್ಚರಿಸಿದರು.





















































