ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ನವಲಿ ಗ್ರಾಮದ ಸಮೀಪ ಸಮತೋಲಿತ ನೀರು. ಇಂಥದ್ದೊಂದು ಚಿಂತನೆ ರಾಜ್ಯ ಸರ್ಕಾರದ್ದು. ಈ ಸಂಬಂಧ ಇಂದು ನಡೆದ ಸಭೆ ಗಮನಸೆಳೆಯಿತು.
ಸಂಗ್ರಹಣಾ ಜಲಾಶಯ ನಿರ್ಮಾಣ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆಯು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ತುಂಗಭದ್ರಾ ಅಣೆಕಟ್ಟಿನ ನೀರು ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾಗಿದ್ದು, ಅದಕ್ಕೆ ಪರ್ಯಾಯವಾಗಿ ಪ್ರವಾಹ ಹರಿಯುವ ನಾಲೆ ಮೂಲಕ ಸಮತೋಲಿತ ಜಲಾಶಯ ನಿರ್ಮಾಣದ ಅವಶ್ಯಕತೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದರು.
https://twitter.com/pro_shankar/status/1366635744278818817?s=24
ಉನ್ನತ ಮಟ್ಟದ ಸಭೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.