ದೊಡ್ಡಬಳ್ಳಾಪುರ: ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಗುರುರಾಜಪ್ಪ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ತಿಮ್ಮರಾಯಪ್ಪ, ಕಾರ್ಯಾಧ್ಯಕ್ಷರಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರದ ಕನ್ನಡ ಜಾಗೃತಿ ಪರಿಷತ್ತಿನಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷ ಗುರುರಾಜಪ್ಪ ಮಾತನಾಡಿ ಸಮುದಾಯದ ಎಲ್ಲಾ ಮುಖಂಡರು ನನ್ಮ ಮೇಲೆ ಭರವಸೆಯಿಟ್ಟು ಆಯ್ಕೆ ಮಾಡಿದ್ದಾರೆ. ನಮ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅರ್ಹ ಬಡವರನ್ನು ಗುರುತಿಸಿ ತಲುಪಿಸಲಾಗುವುದು. ನಮ್ಮ ಸಮಾಜವನ್ನು ಕೇವಲ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದರು. ಮುಂದಿನ ದಿನಗಳಲ್ಲಿ ಛಲವಾದಿ ಮಹಾಸಭಾದ ಸಮುದಾಯದ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಲಾಗುವುದು ಎಂದರು.