ದೊಡ್ಡಬಳ್ಳಾಪುರ: ತಮಿಳುನಾಡಿನ ಆಂತರಿಕ ನದಿ ಜೋಡಣೆಯನ್ನು ವಿರೊದಿಸಿ ದೊಡ್ಡಬಳ್ಳಾಪುರ ನಗರದ ತಾಲೂಕು ಆಪೀಸ್ ಮಂದೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರವು ತಮಿಳುನಾಡಿನಲ್ಲಿ ಚುನಾವಣಾ ಉದ್ದೇಶವನ್ನು ಇಟ್ಟು ಕೊಂಡು ನದಿ ಜೋಡಣೆಗೆ 14 ಸಾವಿರ ಕೋಟಿ ಬಿಡುಗಡೆ ಮಾಡಿದೆ. ಈ ಯೋಜನೆಯಿಂದ ಕರ್ನಾಟಕಕ್ಕೆ ದೊಡ್ಡ ಹೋಡೆತ ಉಂಟಾಗುತ್ತದೆ. ನಮ್ಮ ರಾಜ್ಯಕ್ಕೆ ಯಾವುದೇ ಅನುಧಾನ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದುನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೆ ಈ ಯೋಜನೆಯನ್ನು ಕೈ ಬಿಟ್ಟು ಮೇಕೆದಾಟು, ಮಹದಾಯಿ ಹಾಗೂ ಎತ್ತಿನ ಹೊಳೆ ಯೋಜನೆಯನ್ನು ಕೂಡಲೆ ಜಾರಿಗೆ ತರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಎಲ್ಲಾ ಕನ್ನಡ ಪರ ಸಂಘಟನೆಗಳು ಉಗ್ರ ಹೋರಾಟ ನಡೆಸಲಿದೆ ಎಂದು ಹೋರಾಟಗಾರರು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.