ಬೆಂಗಳೂರು;: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ನಂತರ ರಾಜ್ಯದ ಮತ್ತಷ್ಟು ಮಂತ್ರಿಗಳು ಅಲರ್ಟ್ ಆಗಿದ್ದಾರೆ. ದಿಡೀರ್ ನಿರ್ಧಾರವೊಂದರಲ್ಲಿ ಹಲವು ಸಚಿವರು ಕೋರ್ಟ್ ಮೊರೆಹೋಗಿ ಅಚ್ಚರಿಯ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದಾರೆ.
ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈ ಸಚಿವರು ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ, ಮಾನಹಾನಿ ಉಂಟಾಗುವತಂಹ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿದ್ದಾರೆ. ಇವರೆಲ್ಲಾ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಮಿತ್ರ ಮಂಡಳಿ ಸದಸ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಡಳಿತಾರೂಢ ಪಕ್ಷದ ಸದಸ್ಯರಾಗಿದ್ದಾಗ ಬಂಡಾಯವೆದ್ದು ಮುಂಬೈನಲ್ಲಿ ವಾಸ್ತವ್ಯವಿದ್ದರು. ರಮೇಶ್ ಜಾಕಿಹೊಳಿ ಕೂಡಾ ಇವರ ಜೊತೆಗಿದ್ದರು. ಹಾಗಾಗಿ ಈ ಶಾಸಕರು ‘ಮಿತ್ರ ಮಂಡಳಿ ಸದಸ್ಯರು’ ಎಂದೇ ಗುರುತಾಗಿದ್ದಾರೆ. ಇವರ ಪೈಕಿ ವಿವಾದದಲ್ಲಿ ಸಿಲುಕಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಇನ್ನೂ ಕೆಲವು ಸದಸ್ಯರು ಈ ಕಾನೂನು ಹೋರಾಟ ಕೈಗೊಂಡು ಸುದ್ದಿಗೆ ಗ್ರಾಸವಾಗಿದ್ದಾರೆ.
ಈ ನಡುವೆ, ಈ ಸಚಿವರು ತಮ್ಮ ವಿರುದ್ದ ಸುದ್ದಿ ಪ್ರಸಾರವಾಗಬಹುದೆಂಬ ಆತಂಕದಿಂಧ ಕೋರ್ಟ್ ಮೊರೆಹೋಗಿರುವ ವಿಚಾರ ರಾಜ್ಯ ರಾಜಕಾರಣದಲ್ಲೂ ಸಂಚಲನ ಸೃಷ್ಟಿಸಿದೆ.
ಈ ಮಧ್ಯೆ, ಕೋರ್ಟ್ ಮೊರೆ ಹೋಗಿರುವ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ’ ಎಂದವರು ಹೇಳಿದ್ದಾರೆ.
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ. (2/3)
— Dr Sudhakar K (Modi ka Parivar) (@DrSudhakar_) March 5, 2021
‘ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ’ ಎಂದೂ ಸಚಿವರು ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. (1/3)
— Dr Sudhakar K (Modi ka Parivar) (@DrSudhakar_) March 5, 2021
‘ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ’ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ. (3/3)
— Dr Sudhakar K (Modi ka Parivar) (@DrSudhakar_) March 5, 2021