ವರದಿ: ಹೆಚ್ ಎಂ ಪಿ ಕುಮಾರ್.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ಬಳಿ ದೇವರಮಾರು ಗದ್ದೆಯಲ್ಲಿ 28ನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ ಸ್ಪರ್ಧೆ ಗಮನಸೆಳೆಯುತು.
ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಕಂಬಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಸ್.ಮಲ್ಲಿಕಾರ್ಜುನ್, ಜಾನಪದ ಸ್ಪರ್ಧೆಯಲ್ಲೊಂದಾದ ಕಂಬಳ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು ಇಂತಹ ಸ್ಪರ್ಧೆಗಳನ್ನು ಆಯೋಜಿಸುತ್ತಿರುವ ವಿನಯ್ ಕುಮಾರ್ ಸೊರಕೆ ಮತ್ತು ಶಕುಂತಲಾ ಶೆಟ್ಟಿ ಅವರನ್ನು ಅಭಿನಂದಿಸಿದರು.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಮಾನಾಥ್ ರೈ, ಅಭಯ್ ಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಮುಖ್ಯಮಂತ್ರಿ ಚಂದ್ರು ಮೊದಲಾದ ಗಣ್ಯರು ಕಂಬಳದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.