ದೆಹಲಿ: ದೇಶದಲ್ಲಿ ಕೊರೋನಾ ವೈರಾಣು ಹಾವಳಿ ಹೆಚ್ಚಾಗಿದ್ದು, ಇದೀಗ ಬೆಳಕಿಗೆ ಬರುತ್ತಿರುವ ಪಾಸಿಟಿವ್ ಪ್ರಕರಣಗಳ ಪ್ರಮಾಣ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಅದರಲ್ಲೂ ಗುರುವಾರದ ಬೆಳವಣಿಗೆ ದೇಶದ ಪಾಲಿಗೆ ಮುಂದೇನು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.
ಗುರುವಾರ ದೇಶದ ವಿವಿಧ ರಾಜ್ಯಗಳಲ್ಲಿ ಬರೋಬ್ಬರಿ 35,871 ಹೊಸ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಒಂದೇ ದಿನ 10,63,379 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಆ ಸಂದರ್ಭದಲ್ಲಿ ಈ ವರ್ಷದಲ್ಲಿ ಒಂದೇ ದಿನದಲ್ಲಿ ಅತೀ ಹೆಚ್ಚು ಎಂಬಂತೆ, 35,871 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಇದೇ ಸಂದರ್ಭದಲ್ಲಿ, ಒಂದೇ ದಿನ ಮಹಾಮಾರಿ ವೈರಸ್ 172 ಮಂದಿಯನ್ನು ಬಲಿಪಡೆದುಕೊಂಡಿದ್ದು, ದೇಶದಲ್ಲಿ ಕೊವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ.