ದೆಹಲಿ: ಮಹಾರಾಷ್ಟ್ರ ರಾಜಕಾರಣದಲ್ಲೀಗ ಪೊಲೀಸ್ ಅಧಿಕಾರಿ ಪತ್ರ ಸಂಚಲನಕ್ಕೆ ಕಾರಣವಾಗಿದೆ. ಮುಂಬೈ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಮಾಡಿರುವ ಆರೋಪಗಳು ಆಡಳಿತಾರೂಢ ಮೈತ್ರಿ ಪಕ್ಷಗಳಲ್ಲಿ ತಳಮಳ ಸೃಷ್ಟಿಸಿದೆ.
ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹ ಮಾಡಬೇಕೆಂದು ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದರೆಂದು ಪರಮ್ ಬೀರ್ ಸಿಂಗ್ ಆರೋಪ ಮಾಡಿದ್ದರು. ಇದು ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಎನ್‌ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶರದ್ ಪವಾರ್, ಪೊಲೀಸ್ ಅಧಿಕಾರಿ ಪರಮ್ ಬೀರ್ ಮಾಡಿರುವ ಆರೋಪ ಹಾಗೂ ದೇಶ್ ಮುಖ್ ವಿರುದ್ಧ ಕ್ರಮ ಕೈಗೊಳ್ಳುವ ವಿಷಯವಾಗಿ ಸಿಎಂ ಉದ್ಧವ್ ಠಾಕ್ರೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.