ಬೆಂಗಳೂರು: ಜಗತ್ತಿನಾದ್ಯಂತ ಮರಣ ಮೃದಂಗ ಸೃಷ್ಟಿಸಿರುವ ಕೊರೋನಾ ವೈರಾಣು ಭಾರತದಲ್ಲೂ ಆತಂಕವನ್ನು ಹೆಚ್ಚಿಸಿದೆ. ಇತ್ತ ಕರುನಾಡಲ್ಲೂ ಆತಾಂಕರಾರಿ ರೀತಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಲಿದೆ.
ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಶನಿವಾರ 1,798 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1,186 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,16,633ಕ್ಕೆ ಏರಿಕೆಯಾಗಿದೆ.
ಈ ನಡುವೆ, ಶನಿವಾರ ಸಂಜೆ ನಂತರ, ಭಾನುವಾರ ಸಂಜೆಯವರೆಗಿನ ವರದಿ ಪ್ರಕಾರ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಏಳು ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 12,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.