ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬೆಳವಣಿಗೆ ಬಗ್ಗೆ ಜೆಡಿಎಸ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ರಾಕೇಶ್ ಅವರ ಮೇಲಿದೆ. ಅವರ ಮೇಲೆ ಕೇಸ್ ದಾಖಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾಾರಸ್ವಾಮಿ, ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು? ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು?
1/2— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 25, 2021
ಸರಣಿ ಟ್ವೀಟ್ ಮಾಡಿರುವ ಹೆಚ್‌ಡಿಕೆ, “ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದಿದ್ದಾರೆ.
"ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ," ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು.
2/2— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 25, 2021