ಬೆಂಗಳೂರು: ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ ಎಂಬ ಸಚಿವ ಸುಧಾಕರ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ಹೇಳಿಕೆಯನ್ನು ಮುಂದಿಟ್ಟು ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ಚಾರಿತ್ರ್ಯದ ಬಗ್ಗೆ ಪ್ರಶ್ನೆ ಮಾಡಲಾರಂಭಿಸಿದ್ದಾರೆ. ಈ ಕುರಿತು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಬಿಜೆಪಿ ಪಾಲಿಗೆ ಉತ್ತರಿಸಲಾಗದ ಒಗಟಾಗಿ ಪರಿಗಣಿಸಿದೆ.
ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ” ಎಂಬ ಸಚಿವ ಸುಧಾಕರ್ ಹೇಳಿಕೆಯು ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು
ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
"ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ" ಎಂಬ ಸಚಿವ @mla_sudhakar ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು @BSYBJP ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು. #ಏಕಪತ್ನಿವ್ರತಸ್ಥ
1/3— Siddaramaiah (@siddaramaiah) March 25, 2021
ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ. ಅವರೂ ಕೂಡಾ
ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.
.@mla_sudhakar ಹೇಳಿಕೆಯನ್ನು @BJP4Karnataka ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ @CMofKarnataka ಅವರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು.#ಏಕಪತ್ನಿವ್ರತಸ್ಥ
2/3— Siddaramaiah (@siddaramaiah) March 25, 2021
ಸಚಿವ ಸುಧಾಕರ್ ಅವರ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಸಚಿವ @mla_sudhakar ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು.
1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ.#ಏಕಪತ್ನಿವ್ರತಸ್ಥ
3/3— Siddaramaiah (@siddaramaiah) March 25, 2021