ಬೆಂಗಳೂರು: ಉಪಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ವಿರುದ್ದ ಹರಿಹಾಯ್ದಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೈ ನಾಯಕರು ಮುಸ್ಲಿಂ ಮತದಾರರನ್ನು ಓಲೈಸುತ್ತಿರುವ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ ಎಂದು ಟ್ವೀಟ್ ಮಾಡಿ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ.
1/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 26, 2021
ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ. ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದವರು ಹೇಳಿದ್ದಾರೆ.
ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ? ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು.
2/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 26, 2021
ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್ನ ಪ್ರಮಾದಗಳಿವೆ ಎಂದು ಹೆಚ್ಡಿಕೆ ಬೊಟ್ಟು ಮಾಡಿದ್ದಾರೆ.
ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್ನ ಪ್ರಮಾದಗಳಿವೆ.
3/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 26, 2021
ಬಸವಕಲ್ಯಾಣದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ‘ಮಹಾನ್ನಾಯಕ’ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚುರ ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್ಗೆ ಇಂಥ ದುರ್ಬುದ್ಧಿ ಇಲ್ಲ ಎಂದವರು ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು 'ಮಹಾನ್ನಾಯಕ'ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್ಗೆ ಇಂಥ ದುರ್ಬುದ್ಧಿ ಇಲ್ಲ.
4/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 26, 2021
ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್ನ ಮಹಾನ್ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್ ನಾಯಕರು ತೆಪ್ಪಗಿದ್ದರೆ ಸರಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್ನ ಮಹಾನ್ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್ ನಾಯಕರು ತೆಪ್ಪಗಿದ್ದರೆ ಸರಿ.
5/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 26, 2021