ಬೆಂಗಳೂರು: ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣದ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕಾರ್ಯದರ್ಶಿ ಜಗದೀಶ ಹಿರೇಮನಿ, ಕೆ.ಎಸ್.ನವೀನ್, ರಾಜ್ಯ ಎಸ್. ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಕಾಸಲೆ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಬಿ. ನಾರಾಯಣ್, ರಾಜ್ಯ ಮತ್ತು ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.