ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಉಪಸಮರದ ಅಖಾಡ ರಂಗೇರಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ನಿಧನದಿಂದಾಗಿ ತೆರವಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಹುರಿಯಾಳಾಗಿ ಅಂಗಡಿ ಪತ್ನಿ ಮಂಜುಳಾ ಸ್ಪರ್ಧೆಯಲ್ಲಿದ್ದರೆ, ಕಾಂಗ್ರೆಸ್ ಉಮೇದುವಾರರಾಗಿ ಸತೀಶ್ ಜಾರಕಿಹೊಳಿ ಅಖಾದಲ್ಲಿದ್ದಾರೆ.
ಈ ನಡುವೆ ಸ್ಥಾನವನ್ನು ಉಳಿಸಿಕೊಳ್ಳಲು ಬಿಜೆಪಿ ಭರ್ಜರಿ ಕಸರತ್ತಿನಲ್ಲಿ ತೊಡಗಿದೆ. ಎಪ್ರಿಲ್ 17 ರಂದು ಉಪಚುನಾವಣೆಯ ಮತದಾನ ನಡೆಯಲಿದ್ದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗಳ ಸುರೇಶ್ ಅಂಗಡಿ ಪರವಾಗಿ ರಾಜ್ಯದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಕಳೆದ ಕೆಲ ದಿನಗಳಿಂದ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಮಂಗಳವಾರ ಕೂಡಾ ಅವರ ಪ್ರಚಾರ ಗಮನಸೆಳೆಯಿತು.
ಬೆಳಗಾವಿ ಜಿಲ್ಲೆಯ ರಾಮದುರ್ಗ, ಸವದತ್ತಿ, ಮಬನೂರು ಮುದೇನೂರು ಬೆನಕಟ್ಟಿ ಸೇರಿದಂತೆ ಹಲವು ಹಳ್ಳಿಗಳಲ್ಲಿ ಸಚಿವ ಬಸವರಾಜ್ ನೇತೃತ್ವದಲ್ಲಿ ಕಮಲ ಕಾರ್ಯಕರ್ತರು ಪ್ರಚಾರ ಕೈಗೊಂಡರು.
ವಿಧಾನಸಭೆ ಉಪಾಧ್ಯಕ್ಷ ಅನಂದ ಚಂದ್ರಶೇಖರ ಮಾಮನಿ, ರಾಮದುರ್ಗ ಶಾಸಕರಾದ ಮಹಾದೇವಪ್ಪ ಯಾದವಾಡ, ಶ್ರದ್ಧಾ ಶೆಟ್ಟರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕೂಡಾ ಪ್ರಚಾರಕ್ಕೆ ಸಾಥ್ ನೀಡಿದರು.
ಇದೇ ಸಂದರ್ಭದಲ್ಲಿ ಮದನೂರು ಕ್ರಾಸ್ ಬಳಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾನ್ಯ ಶ್ರೀ ಬಸವರಾಜ ಅವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.