ದೊಡ್ಡಬಳ್ಳಾಪುರ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಫಲಿತಾಂಶದಲ್ಲಿ 5ನೇ ರ್ಯಾಂಕ್ ಪಡೆದ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿ ಬಿಜಲ್ ಭೂಷಲ್ ಅವರನ್ನು ಆಡಳಿತ ಮಂಡಳಿವತಿಯಿಂದ ಸನ್ಮಾನಿಸಲಾಯಿತು.
ಆರ್.ಎಲ್.ಜಾಲಪ್ಪ ತಾಂತ್ರಿಕ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡಿ 5ನೇ ರಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದುಕೊಟ್ಟ, ನೇಪಾಳದ ಬಿಜಲ್ ಭೂಷಲ್ ಹಾಗೂ ಅವರ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಆರ್.ಎಲ್.ಜಾಲಪ್ಪ ಸಮೂಹ ಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ, ಪ್ರಾಂಶುಪಾಲರಾದ ಡಾ.ಶ್ರೀನಿವಾಸ್ ರೆಡ್ಡಿ, ಉದ್ಯೋಗಾಧಿಕಾರಿ ಬಾಬು ರೆಡ್ಡಿ, ಪ್ರಾಧ್ಯಾಪಕರಾದ ಡಾ.ಕೆ.ಸುನೀಲ್ ಕುಮಾರ್, ಡಾ.ಹನುಮಂತೇಗೌಡ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಜರಿದ್ದರು.