ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಇಂದಿನ ಪಾಸಿಟಿವ್ ಕೇಸ್‌ಗಳು ಹಾಗೂ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆಗಳು ಆತಂಕಕಾರಿ ಪ್ರಮಾಣದಲ್ಲಿವೆ.
ಬುಧವಾರ ಸಂಜೆಯ ಹೊತ್ತಿಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 11,265 ಹೊಸ ಪ್ರಕರಣಗಳು ವರದಿಯಾಗಿವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 10,94,912ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲೇ ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವೆ 8,155 ಮಂದಿಯಲ್ಲಿ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5,02,024ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.
Today's Media Bulletin 14/04/2021
Please click on the link below to view bulletin.https://t.co/l3xlt3aGUY@mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity @allaboutbelgaum @mysuruvarthe pic.twitter.com/FCZwEOECfK— K'taka Health Dept (@DHFWKA) April 14, 2021