ಸುದೀಪ್ ಅವರ ‘ವಿಕ್ರಾಂತ್ ರೋಣಾ’ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಹವಾ ಎಬ್ಬಿಸಿದೆ. ಈ ಚಿತ್ರ ಬಿಡುಗಡೆಗೆ ನುಹೂರ್ತ ಫಿಕ್ಸ್ ಆಗಿದ್ದು ಕಿಚ್ಚನಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಈ ಸಿನಿಮಾ ಬಿಡುಗಡೆ ಬಗ್ಗೆ ಟ್ವೀಟ್ ಮಾಡಿ ಸುದೀಪ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ ರೋಮಾಂಚನಕಾರಿ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ! ಎಂದು ಅವರು ಪೋಸ್ಟ್ ಹಾಕಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ ಎಂದವರು ಹೇಳಿಕೊಂಡಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ *ರೋಮಾಂಚನಕಾರಿ* ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ!
ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ.#VikrantRona
🤗 pic.twitter.com/uRbdLpHlB2— Kichcha Sudeepa (@KicchaSudeep) April 15, 2021
ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚನ ಹವಾ ಎಬ್ಬಿಸಿದೆ. ಸಿನಿಮಾ ಬಿಡುಗಡೆ ಸಂಬಂಧ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
August 19th 2021 ವಿಶ್ವಾದ್ಯಂತ Box ಆಫೀಸಿಗೆ ಆಕ್ರಮಣ, ಅಭಿಮಾನಿಗಳು ಸಂಭ್ರಮಿಸೋಣ, ಮಾಧ್ಯಮದ ಮೂಲಕ ಪಸರಿಸೋಣ, ಉದ್ಯಮವಾಗಿ ಸ್ವಾಗತಿಸೋಣ, ನಮ್ಮ ಕೆಚ್ಚೆದೆಯ ಕಿಚ್ಚನ 'ವಿಕ್ರಾಂತ್ ರೋಣ '. @KicchaSudeep #VikrantRonaOnAug19 👍✌️ pic.twitter.com/5QEPBDNIQk
— Raghuram (@raghuram9777) April 15, 2021