ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ವಿವೇಕ್ ಇನ್ನಿಲ್ಲ. ತೀವ್ರ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ಹಾಸ್ಯ ನಟ ವಿವೇಕ್ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
59 ವರ್ಷದ ವಿವೇಕ್ಗೆ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಯಿತು.
220ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ವಿವೇಕ್ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. .
ವೆಂಟ್ರಿಕ್ಯುಲರ್ ಫೈಬ್ರಿಲೇಷನ್ ಎಂಬ ಹೃದಯ ಸಂಬಂಧಿ ತೊಂದರೆಗೀಡಾಗಿದ್ದರು ಎಂದು ಹೇಳಲಾಗುತ್ತಿದೆ. ನಟ ವಿವೇಕ್ ನಿಧನಕ್ಕೆ ಚಿತ್ರೋದ್ಯಮ ಗಣ್ಯರು ಕಂಬನಿ ಮಿಡಿದಿದ್ದಾರೆ.