ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ಸೊಂಕು ನಿಯಂತ್ರಣ ಮಾಡಲು ಕೈಗೊಳ್ಳಬೇಕಾದ ಅತಿ ಹೆಚ್ಚಿನ ಕ್ರಮಗಳ ಕುರಿತಂತೆ ದಿನಾಂಕ 29-4-2021 ಗುರುವಾರ ಬೆಳಿಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡಿದ್ದು ಪರಿಸ್ಥಿತಿ ನಿಭಾಯಿಸಲು ಸರ್ಕಾರ ಹರಸಾಹಸಪಡುತ್ತಿದೆ. ಬುಧವಾರ ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಳು 39 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿವೆ. ಈ ಸವಾಲಿನ ಜೊತೆಯಲ್ಲೇ ಪ್ರಸ್ತುತ ಲಾಕ್‌ಡೌನ್ ರೀತಿ ನಿಯಮ ಜಾರಿಯೂ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿವೆ. ಆದರೂ ನಿಷ್ಟೂರ ಕ್ರಮ ಅನಿವಾರ್ಯವಾಗಿದ್ದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟು ಶಮನ ಸಂಬಂಧ ಸಿಎಂ ಯಡಿಯೂರಪ್ಪ ಕಾರ್ಯತಂತ್ರದಲ್ಲಿ ತೊಡಗಿದ್ದಾರೆ.
ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಸರಣಿ ಸಭೆ ನಡೆಸಿದ ಯಡಿಯೂರಪ್ಪ, ಸಚಿವರು ಹಾಗೂ ಉನ್ನತಾಧಿಕಾರಿಗಳ ಸಭೆ ನಡೆಸಿ ಕುತೂಹಲದ ಕೇಂದ್ರ ಬಿಂದುವಾದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವಥ್ ನಾರಾಯಣ, ಸಚಿವರಾದ ಬಿ.ಎ.ಬಸವರಾಜ, ಬಸವರಾಜ ಬೂಮ್ಮಾಯಿ, ಅರ್.ಅಶೋಕ್, ಡಾ.ಕೆ. ಸುಧಾಕರ್ ಸಹಿತ ಮಂತ್ರಿಗಳು ಭಾಗವಹಿಸಿದ್ದರು. ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.