ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದೆ. ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿದ್ದ ಪ್ರತಾಪ್ ಗೌಡ ಪಾಟೀಲ್ ಅವರನ್ನು ಗೆಲ್ಲಿಸಲು ಸಿಎಂ ಬಿಎಸ್‌ವೈ, ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರನೇಕರು ಭಾರೀ ಪ್ರಚಾರ ಕೈಗೊಂಡಿದ್ದರು. ಆದರೂ ಮಸ್ಕಿಯ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಲಿಲ್ಲ. ಬಿಜೆಪಿ ಹುರಿಯಾಳು ಪ್ರತಾಪ್ ಗೌಡ ಪಾಟೀಲ್ ಸೋಲುಂಡಿದ್ದು, ಮತದಾರರ ತೀರ್ಪನ್ನು ಗೌರವಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ ಎಂದು ಪಕ್ಷದ ಸೇನಾನಿಗಳಿಗೆ ಧೈರ್ಯ ತುಂಬಿದ್ದಾರೆ.
ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yediyurappa (Modi Ka Parivar) (@BYVijayendra) May 2, 2021