ಬೆಂಗಳೂರು: ರೈತ ಹೋರಾಟಗಾರ, ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರು ಇಂದು ವಿಧಿವಶರಾದರು.
ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗಿನ ಜಾವ ವಿಧಿವಶರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
1998ರಲ್ಲಿ ಬೆಳಗಾವಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಬಾಬಾಗೌಡರು ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. ರೈತ ಚಳವಳಿ ಮೂಲಕವೇ ಗುರುತಿಸಿಕೊಂಡಿದ್ದ ಅವರು, ಬಿಜೆಪಿ, ಜೆಡಿಎಸ್, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪಕ್ಷಾಂತರಗೊಂಡಿದ್ದರು.