ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿಗಳು ಹಾಗೂ ಶತಾಯುಷಿ ಶ್ರೀ ಎಚ್.ಎಸ್. ದೊರೆಸ್ವಾಮಿ (103) ಅವರು ಇಂದು ಮಧ್ಯಾಹ್ನ ನಿಧನ ಹೊಂದಿದರೆಂದು ತಿಳಿದು ತೀವ್ರ ದುಃಖವಾಯಿತು.ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಕರುನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರು ನೇರ ನಡೆ ನುಡಿಯ ಮೇರು ವ್ಯಕ್ತಿಯಾಗಿದ್ದರು. ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದ ಅವರು ಇಂದಿನ ಪೀಳಿಗೆಗೂ ಮಾರ್ಗದರ್ಶಕರಾಗಿದ್ದರು. ಸಮಾಜಮುಖಿಯಾಗಿ, ಸಮಾಜದ ಒಳಿತಿಗಾಗಿ ಸದಾ ಚಿಂತಿಸುತ್ತಿದ್ದ ದೊರೆಸ್ವಾಮಿ ಅವರು ಬಸವ ಪುರಸ್ಕಾರ ಸೇರಿದಂತೆ ಹಲವು
ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ಇವರ ಹೋರಾಟಕ್ಕೆ ಗಾಂಧಿ ಸೇವಾ ಪ್ರಶಸ್ತಿ, ಬಸವ ಪುರಸ್ಕಾರ ಸೇರಿ ಅನೇಕ ಪ್ರಶಸ್ತಿಗಳು ಸಂದಿದ್ದವು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದ ಸದಸ್ಯರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.