ಬೆಂಗಳೂರು: ರಾಜ್ಯದ ಮಾಜಿ ಸಚಿವ ಪ್ರೊಫೆಸರ್ ಮುಮ್ತಾಜ್ ಅಲಿಖಾನ್ ವಿಧಿವಶರಾಗಿದ್ದಾರೆ. 98 ವರ್ಷ ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಡಿ ಪಾಳ್ಯ ಗ್ರಾಮದವರಾದ ಪ್ರೊಫೆಸರ್ ಮುಮ್ತಾಜ್ ಅಲಿಖಾನ್ 2008 ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅಲ್ಪಸಂಖ್ಯಾತರ, ಹಜ್ ಮತ್ತು ವಕ್ಫ್ ಖಾತೆ ಸಚಿವರಾಗಿದ್ದರು.
ಮುಮ್ತಾಜ್ ಅಲಿಖಾನ್ ನಿಧನದ ಬಗ್ಗೆ ಸಿಎಂ ಯಡಿಯೂರಪ್ಪ ಸಂಪುಟದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ದುಃಖ ವ್ಯಕ್ತಪಡಿಸಿದ್ದಾರೆ.