ಬೆಂಗಳೂರು: ಸಿಎಂ ಬದಲಾವಣೆಗೆ ಒತ್ತಡ ಒಂದೆಡೆಯಾದರೆ, ಬಿಎಸ್‌ವೈ ಅವರನ್ನ ಸಮರ್ಥಿಸುವವರು ಇನ್ನೊಂದೆಡೆ. ರಾಜ್ಯ ಬಿಜೆಪಿಯಲ್ಲಿನ ಈ ಬೆಳವಣಿಗೆಯನ್ನು ಖಂಡಿಸಿರುವ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ರಾಜ್ಯಪಾಲರನ್ನು ಒತ್ತಾಯಿಸಿದೆ.
ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ‘ಡಿಸ್ಮಿಸ್ ಗವರ್ನ್‌ಮೆಂಟ್’ ಅಭಿಯಾನವನ್ನು ಆರಂಭಿಸಿದ್ದಲ್ಲದೆ, ಪ್ರಧಾನಿ ಮೋದಿಯವರನ್ನೂ ಮುಜುಗರಕ್ಜೀಡುಮಾಡುವ ರೀತಿಯಲ್ಲಿ ಪ್ರತಿಕ್ರಿಸುತ್ತಿದ್ದಾರೆ. ಈ ಸಂಬಂಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಪ್ರತಿಕ್ರಿಯೆ ಗಮನಸೆಳೆದಿದೆ.
ಸದ್ಯದ ರಾಜಕೀಯ ಬೆಳವಣಿಗೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿಯೊಳಗಿನ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದು ಅರಾಜಕತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಘನತೆವೆತ್ತ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಬಿಜೆಪಿಯೊಳಗಿನ ಒಳಜಗಳದಿಂದಾಗಿ
ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದು
ಅರಾಜಕತೆ
ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ
ಘನತೆವೆತ್ತ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ @BJP4Karnataka ಸರ್ಕಾರವನ್ನು ವಜಾಗೊಳಿಸಬೇಕು
ಎಂದು ಒತ್ತಾಯಿಸುತ್ತೇನೆ.
1/6#DismissBJPgovt— Siddaramaiah (@siddaramaiah) June 17, 2021
ಕಳೆದೆರಡು ದಿನಗಳಿಂದ ವಿಧಾನಸೌಧವೇ ಕೆ.ಕೆ. ಗೆಸ್ಟ್‌ಹೌಸ್ ಮತ್ತು ಬಿಜೆಪಿ ಕಚೇರಿಗೆ ಸ್ಥಳಾಂತರಗೊಂಡಂತೆ ಕಾಣುತ್ತಿದೆ. ಕಚೇರಿಯಲ್ಲಿ ಸಚಿವರಿಲ್ಲ, ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಲ್ಲ. ಕೊರೊನಾ ಇನ್ನೂ ಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ, ಜನರ ಗೋಳನ್ನು ಕೇಳುವವರೇ ಇಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮತ್ತೆ ಹೆಚ್ಚಾಗುತ್ತಿರುವ ಕೋರೊನಾ ಸೋಂಕು/ಸಾವು, ಹಳ್ಳಿಗಳಿಗೂ ಹರಡುತ್ತಿರುವ ಸೋಂಕು, ಕೊರೊನಾ ಮೂರನೇ ಅಲೆ ಬೇಗನೇ ಬರುವ ತಜ್ಞರ ಭವಿಷ್ಯ, ಲಾಕ್‌ಡೌನ್‌ನಿಂದಾಗಿ ಹೆಚ್ಚುತ್ತಿರುವ ನಿರುದ್ಯೋಗ… ಈ ಸವಾಲುಗಳನ್ನು ಎದುರಿಸಿ ಪರಿಹರಿಸಬೇಕಾದ ರಾಜ್ಯ ಸರ್ಕಾರವೇ ಐಸಿಯುನಲ್ಲಿದೆ ಎಂದು ಪರಿಸ್ಥಿತಿ ಬಗ್ಗೆ ವ್ಯಂಗ್ಯವಾಡಿರುವ ಸಿದ್ದರಾಮಯ್ಯ, ಸಚಿವರು/ಶಾಸಕರನ್ನು ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಪ್ರಸಕ್ತ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ಎದುರಿಸಿ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿದ್ದ ಸಿಎಂ ಯಡಿಯೂರಪ್ಪ ಅವರು, ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ
ಎಂದು ಲೇವಡಿ ಮಾಡಿದ್ದಾರೆ.
ಸಚಿವರು/ಶಾಸಕರನ್ನು ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಪ್ರಸಕ್ತ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ಎದುರಿಸಿ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿದ್ದ @CMofKarnataka,
ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ.#DismissBJPgovt
4/5— Siddaramaiah (@siddaramaiah) June 17, 2021
ಪರಸ್ಪರ ಕಚ್ಚಾಡುತ್ತಿರುವಬಿಜೆಪಿ ನಾಯಕರ ಕಿವಿಹಿಂಡಿ ಬುದ್ದಿ ಹೇಳಬೇಕಾದ ವರಿಷ್ಠರು, ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ಬಿಜೆಪಿ ಹೈಕಮಾಂಡ್‌ಗೆ ಬೇಕಾಗಿರುವುದು ಸರ್ಕಾರದ ಸುಭದ್ರತೆಯೇ? ಮುಖ್ಯಮಂತ್ರಿಗಳ ಅಭದ್ರತೆಯೇ? ಬೇಗ ನಿರ್ಧಾರ ಮಾಡಿಬಿಡಿ. ನಗೆಪಾಟಲಿಗೀಡಾಗಿರುವ ರಾಜ್ಯ ಬಿಜೆಪಿಯ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ ಪ್ರಧಾನಿ ನರೇಂದ್ರ ಮೋದಿ, ತಾವೊಬ್ಬ ದುರ್ಬಲ ನಾಯಕನೆಂದು ಸಾಬೀತುಪಡಿಸಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿಯವರು ಈಗಿನ ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಸ್ಪಷ್ಟಪಡಿಸಲಿ.
ನಗೆಪಾಟಲಿಗೀಡಾಗಿರುವ @BJP4Karnataka ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ @narendramodi, ತಾವೊಬ್ಬ ದುರ್ಬಲ ನಾಯಕನೆಂದು ಸಾಬೀತುಪಡಿಸಿದ್ದಾರೆ.
56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿಯವರು ಈಗಿನ ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಸ್ಪಷ್ಟಪಡಿಸಲಿ.#DismissBJPgovt
6/6— Siddaramaiah (@siddaramaiah) June 17, 2021