ಬೆಂಗಳೂರು: ಬಿಜೆಪಿ ಶಾಸಕ ಹೆಚ್.ವಿಶ್ವನಾಥ್ ಅವರು ಬಯಲು ಮಾಡಿರುವ ನೀರಾವರಿ ಯೋಜನೆಗಳ ಹಗರಣ ಕುರಿತಂತೆ ತನಿಖೆ ನಡೆಸಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ 150 ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ 2000ಕೋಟಿ ನೀರಾವರಿ ಕಿಕ್‌ಬ್ಯಾಕ್ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ? ಎಂದು ಅವರು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.
2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ₹2000ಕೋಟಿ ನೀರಾವರಿ ಕಿಕ್‌ಬ್ಯಾಕ್ ಆರೋಪ ಮಾಡಿದ್ದಾರೆ.ಈಗ ತನಿಖೆ ಯಾಕಿಲ್ಲ?
1/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 19, 2021
ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ ಯಡಿಯೂರಪ್ಪ ಅವರು 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.
ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ @BSYBJP 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು.
2/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 19, 2021
ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ತನಿಖೆ ನಡೆಯಬೇಕು ಎಂದವರು ಒತ್ತಾಯಿಸಿದ್ದಾರೆ.
ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು.
3/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 19, 2021