ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಂಬನಿ ಮಿಡಿದಿದ್ದಾರೆ.
ನೇರ ನಿಷ್ಠುರ ಮನೋಭಾವದ ಸದಾನಂದ ಅವರು, ʼಸಂಜೆವಾಣಿʼ, ʼಈ ಸಂಜೆʼ ಹಾಗೂ ʼಕನ್ನಡಪ್ರಭʼ ಪತ್ರಿಕೆಗಳಲ್ಲಿ ಕೆಲಸ ಮಾಡಿ ತಮ್ಮದೇ ಛಾಪು ಮೂಡಿಸಿದ್ದರು. ಬರವಣಿಗೆಯಲ್ಲಿ ತೀಕ್ಷ್ಣತೆ, ಬರೆಯಬೇಕಾದ್ದನ್ನು ನೇರವಾಗಿ ಮುಲಾಜಿಲ್ಲದೆ ಬರೆಯುತ್ತಿದ್ದವರು ಅವರು.
ಅವರ ಅಗಲಿಕೆ ಬಹಳ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಬಂಧುಬಳಗ, ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಭಗವಂತ ದಯಪಾಲಿಸಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.