ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಇನ್ನೂ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಸೋಂಕಿನ ವೇಗದ ಪ್ರಮಾಣ ತಗ್ಗಿದೆ. ವಿವಿಧ ರಾಜ್ಯಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಬುಧವಾರ ಬೆಳಿಗ್ಗೆವರೆಗೆ 43,733 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 3,06,63,665ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಒಂದೇ ದಿನದಲ್ಲಿ 930 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.



















































