ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕಾರ್ಕಳ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಪ್ರಕರಣ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ.
ಈ ಪ್ರಕರಣ ಕುರಿತಂತೆ ಟ್ವೀಟ್ ಮಾಡಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ ಎಂದಿದ್ದಾರಲ್ಲದೆ, ಈ ಬಗ್ಗೆ ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ದೇಶದ್ರೋಹಿಗಳನ್ನು ಸನರ್ಥಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸುನಿಲ್ ಕುಮಾರ್, ದೇಶದ್ರೋಹ ಎಂದರೇನು ಎಂದು ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು ಎಂದು ದೂರಿದ್ದಾರೆ. ‘ಅದು ನಿಮ್ಮ ಕಾಲ. ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಇದು ನಮ್ಮ ಕಾಲ’ ಎಂದು ಸಿದ್ದರಾಮಯ್ಯ ಅವರಿಗೆ ಎದಿರೇಟು ನೀಡಿದ್ದಾರೆ.
ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ.
ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಇದು ನಮ್ಮ ಕಾಲ.1/n
— Sunil Kumar Karkala (Modi Ka Parivar) (@karkalasunil) July 9, 2021
ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ. ಕೆಜೆ ಹಳ್ಳಿ ಗಲಭೆ – ನಿಮ್ಮ ಸಮರ್ಥನೆ ಮಂಗಳೂರು ಗಲಭೆ- ನಿಮ್ಮ ಸಮರ್ಥನೆ ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ – ನಿಮ್ಮ ಸಮರ್ಥನೆ ಹಿಂದು ಕಾರ್ಯಕರ್ತರ ಕಗ್ಗೊಲೆ – ನಿಮ್ಮ ಸಮರ್ಥನೆ ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆ – ನಿಮ್ಮ ಸಮರ್ಥನೆ ಎಂದು ಅವರು ಕೆಣಕಿದ್ದಾರೆ.
ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ.
ಕೆಜೆ ಹಳ್ಳಿ ಗಲಭೆ – ನಿಮ್ಮ ಸಮರ್ಥನೆ
ಮಂಗಳೂರು ಗಲಭೆ- ನಿಮ್ಮ ಸಮರ್ಥನೆ
ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ – ನಿಮ್ಮ ಸಮರ್ಥನೆ
ಹಿಂದು ಕಾರ್ಯಕರ್ತರ ಕಗ್ಗೊಲೆ – ನಿಮ್ಮ ಸಮರ್ಥನೆ
ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆ – ನಿಮ್ಮ ಸಮರ್ಥನೆ
2/2— Sunil Kumar Karkala (Modi Ka Parivar) (@karkalasunil) July 9, 2021