ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟ ಅವಾಂತರ ಸೃಷ್ಟಿಸಿದೆ. ಭೂಕುಸಿತ, ಮರಗಳ ನೆಲಸಮದಂತಹಾ ಹಲವು ಘಟನೆಗಳಿಂದಾಗಿ ಜನರು ಪರದಾಡುವಂತಾಗಿದೆ. ಇದೇ ಸಂದರ್ಭದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತಷ್ಟು ದಿನ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಲೈ 18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರೆಡ್ ಅಲರ್ಟ್ ಘೋಷಣೆ:
ಉತ್ತರ ಕನ್ನಡ. ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜುಲೈ 16ರಂದು ರೆಡ್ ಅಲರ್ಟ್ ಘೋಷಿಸದೆ. ಜುಲೈ 15 ಮತ್ತು 17ರಂದು ಈ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಘೋಷಣೆ:
ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಜುಲೈ 14, 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದೆ. ಜುಲೈ 15, 16, 17 ಆರೆಂಜ್ ಅಲರ್ಟ್ ಘೋಷಿಸಲಾಗಿದೆ.