ಮಂಗಳೂರು: ಬಂದರು ನಗರಿ ಮಂಗಳೂರಿನ ಪಂಪ್‌ವೆಲ್ ಬಳಿ ಕಾರೊಂದು ಅಪಘಾತಕ್ಕೀಡಾಗಿದೆ. ಕರಾವಳಿಯಲ್ಲಿ ಮಳೆಯಾಗುತ್ತಿದ್ದು ಅವಾಂತರಗಳು ನಡೆಯುತ್ತಲೇ ಇವೆ. ಇದೇ ಸಂದರ್ಭದಲ್ಲಿ ಮಂಗಳೂರಿನ ಪಂಪ್‌ವೆಲ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಸಂಜೆ ಅಪಘಾತ ಸಂಭವಿಸಿದ್ದ, ಘಟನಾ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತೆಂದು ಸ್ಥಳೀಯರು ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸುರಕ್ಷಾ ಕ್ರಮಕ್ಕೆ ಆದ್ಯತೆ ನೀಡದಿರುವುದಕ್ಕೆ ಈ ಅಪಘಾತ ಕಾರಣ ಎಂದು ಸ್ಥಳೀಯರ ಆರೋಪಿಸಿದ್ದಾರೆ.