ಗದಗ : ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ನಿರಂತರವಾಗಿ ಆರು ವರ್ಷಗಳ ಕಾಲ ಐತಿಹಾಸಿಕ ಪ್ರತಿಭಟನೆ ನರಗುಂದ ಪಟ್ಟಣದಲ್ಲಿ ನಡೆದಿದೆ.,
ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಏಳನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನರಗುಂದ ಪಟ್ಣಣದಲ್ಲಿ ರೈತರ ಮೌನ ಪ್ರತಿಭಟನಾ ರ್ಯಾಲಿ ನಡೆಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪುಬಾವುಟ ಪ್ರದರ್ಶಿಸಿ ಇಂದು ಕರಾಳ ದಿನವನವಾಗಿ ಆರಚಣೆ ಮಾಡಿದರು.
ಸಂಘಟನೆಯ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಪ್ರತಿಭಟನೆ ಪಾದಯಾತ್ರೆ ನಡೆಯಿತು. ಬಾಬಾ ಸಾಹೇಬ್ ಬಾವೇ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜೊತೆಗೆ ಕಳಸಾ ಬಂಡೂರಿ ಹೋರಾಟದಲ್ಲಿ ನಿಧಾನರಾದ ರೈತರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ನಂಂತರ ಬಾಬಾ ಸಾಹೇಬ್ ಬಾವೆ ಪುತ್ಥಳಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ರ್ಯಾಲಿ ಬಳಿಕ ಹೋರಾಟದ ವೇದಿಕೆಯಲ್ಲಿ ಮುಂದಿನ ಹೋರಾಟದ ರೂಪುರೇಷದ ನಿರ್ಣಯಗಳನ್ನ ಕೈಗೊಳ್ಳಲಿದ್ದಾರೆ…