ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ SSLC ಪರೀಕ್ಷೆಗಳನ್ನು ಇಂದಿನಿಂದ ಎದುರಿಸಲಿದ್ದು ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ.
— B.S.Yediyurappa (Modi Ka Parivar) (@BSYBJP) July 18, 2021
ಪರೀಕ್ಷೆಯ ಬಗ್ಗೆ ಯಾವುದೇ ರೀತಿಯ ಆತಂಕ ಪಡದೇ, ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಅಂಕ ಪಡೆದು ನಿಮ್ಮ ಪೋಷಕರಿಗೆ, ಶಾಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಪ್ರೀತಿಯ SSLC ವಿದ್ಯಾರ್ಥಿಗಳೇ,
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ SSLC ಪರೀಕ್ಷೆಗಳನ್ನು ಇಂದಿನಿಂದ ಎದುರಿಸಲಿದ್ದೀರಿ. ಪರೀಕ್ಷೆಯ ಬಗ್ಗೆ ಯಾವುದೇ ರೀತಿಯ ಆತಂಕ ಪಡದೇ, ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಅಂಕ ಪಡೆದು ನಿಮ್ಮ ಪೋಷಕರಿಗೆ, ಶಾಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಶುಭ ಹಾರೈಸುತ್ತೇನೆ. (1/2)— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 19, 2021
ಕೋವಿಡ್-19 ನಿಯಮಗಳನ್ನು ತಪ್ಪದೇ ಪಾಲಿಸಿ ಧೈರ್ಯದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ. ನಿಮ್ಮ ಭವಿಷ್ಯ ಉತ್ತಮವಾಗಿರಲೆಂದು ಶುಭ ಹಾರೈಸಿದ್ದಾರೆ.
ಕೋವಿಡ್-19 ನಿಯಮಗಳನ್ನು ತಪ್ಪದೇ ಪಾಲಿಸಿ ಧೈರ್ಯದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ. ನಿಮ್ಮ ಭವಿಷ್ಯ ಉತ್ತಮವಾಗಿರಲೆಂದು ಶುಭ ಹಾರೈಸುತ್ತೇನೆ. (2/2)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 19, 2021
ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಪರೀಕ್ಷೆ ಬರೆಯುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. pic.twitter.com/AyvN9yVWx3
— BJP Karnataka (@BJP4Karnataka) July 19, 2021