ದೆಹಲಿ: ಮಳೆ ಪ್ರವಾಹ ಸಂತ್ರಸ್ತ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವಿನ ಹಸ್ತ ಚಾಚಿದೆ. 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.629.03 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ರೂ.701.00 ಕೋಟಿಗಳ ನೆರವಿನ ಅನುಮೋದನೆಯನ್ನು SDRF ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆಶೋಭಾ ಕರಂದ್ಲಾಜೆ, ಅನಾವೃಷ್ಟಿ ಕಾರಣದಿಂದ 2020ನೇ ವರ್ಷದಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ ರೂ.113.69 ಕೋಟಿಗಳನ್ನು SDRF ಮಾನದಂಡಗಳ ಅಡಿಯಲ್ಲಿ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.
2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಿಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು ರೂ. 750.12 ಕೋಟಿ ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಕೂಡಾ ಕೃಷಿ ಮತ್ತು ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.