ದಾವಣಗೆರೆ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ದಾವಣಗೆರೆ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ನಗರಾಭಿವೃದ್ಧಿ ಮಂತ್ರಿ ಬಿ.ಎ.ಬಸವರಾಜ ಅವರು ಅಮಿತ್ ಶಾ ಅವರಿಗೆ ಶಾಲು ಹೊದಿಸಿ, ಗೋವು ಮತ್ತು ಕರುವಿನ ಬೆಳ್ಳಿ ಪ್ರತಿಮೆ ನೀಡಿ ಆತ್ಮೀಯವಾಗಿ ಗೌರವಿಸಿದರು..
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ, ಗೃಹ ಸಚಿವ ಆರಗ ಜ್ಞಾನೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು