ಮಂಗಳೂರು: ರಾಜ್ಯದಲ್ಲಿ ಶುಕ್ರವಾರ ಬೃಹತ್ ಲಸಿಕಾ ಮೇಳ ನಡೆಯಲಿದೆ. ಅದರಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೂ ಲಸಿಕಾ ಮೇಳ ನಡೆಯಲಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.
ಸೆಪ್ಟೆಂಬರ್ 17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್ ಲಸಿಕಾಕರಣ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ದಕ್ಷಿಣ ಕನ್ನಡದಲ್ಲಿ 533 ಮತ್ತು ಉಡುಪಿ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ನೀಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಸ್ಥಳೀಯ ಸಂಸ್ಥೆಗಳ ಸದಸ್ಯರು, ಪಿಡಿಒಗಳು ಗ್ರಾಮಲೆಕ್ಕಿಗರು, ಆಶಾ ಕಾರ್ಯಕರ್ತರ ಮೂಲಕ ಮಾಹಿತಿ ಪಡೆದು ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.