ದೆಹಲಿ: ಪೆಟ್ರೋಲ್ ಡೀಸೆಲ್ ಸಹಿತ ತೈಲೋತ್ಪನ್ನಗಳ ಬೆಲೆ ಏರಿಕೆಯನ್ನು ತಡೆಯಲು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿವೆ. ಒಂದು ವೇಳೆ ತೈಲೋತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ ಸೇರಿದರೆ ಪೆಟ್ರೋಲ್, ಡೀಸೆಲ್ ದರ ಕಡಿಮೆಯಾಗಬಹುದು ಎಂಬ ಲೆಕ್ಕಾಚಾರ ಸಾಗಿತ್ತು. ಆದರೆ ಕೇಂದ್ರದ ನಿರ್ಧಾರವೇ ಬೇರೆಯಾಗಿದೆ.
ಈ ಸಂಬಂಧ ಲಕ್ನೋದಲ್ಲಿಂದು ನಡೆದ ಜಿಎಸ್ಟಿ ಕುರಿತ ಸಭೆ ಕುತೂಹಲದ ಕೇಂದ್ರಬಿಂದುವಾಗಿತ್ತು. ಜಿಎಸ್ಟಿಯ 45ನೇ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾಧ್ಯಮಗಳಿಗೆ ವಿವರ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್, ಡೀಸೆಲ್‌ನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಸಾಧ್ಯವಿಲ್ಲ. ಹಾಗಾಗಿ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು.
https://youtu.be/D4ZQJND-SOY