ಉಡುಪಿ : ಅಸಂಘಟಿತ ಕಾರ್ಮಿಕರ ಇ-ಶ್ರಮ್ ಕಾರ್ಡ್ ವಿತರಣೆ ಹಾಗೂ ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಉಚಿತ ನೋಂದಣಿ ಅಭಿಯಾನ ಬ್ರಹ್ಮಾವರದಲ್ಲಿ ನಡೆಯಿತು.
ಉಡುಪಿಯ ಸಂಚಲನ ( ರಿ.) ಹಾಗೂ ಅಮ್ಮ ಎಂಟರ್ಪ್ರೈಸಸ್ ಬ್ರಹ್ಮಾವರ ನೇತೃತ್ವದಲ್ಲಿ 22ನೇ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಹಭಾಗಿತ್ವದಲ್ಲಿ ಭಾನುವಾರ ಬ್ರಹ್ಮಾವರ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾದ ಅಸಂಘಟಿತ ಕಾರ್ಮಿಕರ ಇ-ಶ್ರಮ್ ಕಾರ್ಡ್ ಹಾಗೂ ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಉಚಿತ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಕೆ ರಘುಪತಿ ಭಟ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘದ (ನಿ.) ನಿರ್ದೇಶಕರಾದ ಬಿರ್ತಿ ರಾಜೇಶ್ ಶೆಟ್ಟಿ, ಸಂಚಲನ (ರಿ.) ಉಡುಪಿ ಗೌರವಾಧ್ಯಕ್ಷರಾದ ಕೆ. ಶಿವರಾಮ, ಜಿಲ್ಲಾ ಕಾರ್ಮಿಕ ಇಲಾಖೆಯ ಆಯುಕ್ತರಾದ ಕುಮಾರ್ ಬಿ. ಆರ್, ಸೇವಾ ಸಿಂಧು ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಅರುಣ್ ಎಸ್. ಕೆ, ಉದ್ಯಮಿಗಳಾದ ಎಸ್. ನಾರಾಯಣ್, ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಕರ್ನಾಟಕ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಬ್ರಹ್ಮಾವರದ ಚೇತನ್ ಶೆಟ್ಟಿ, ಸಮಾಜ ಸೇವಕರಾದ ಅರಲ್ ಡಿಸೋಜ, ಸುಮತ ನಾಯಕ್ ಅಮ್ಮುಂಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.