ಹೈದರಾಬಾದ್: ತೆಲುಗು ಚಿತ್ರರಂಗದ ತಾರಾ ದಂಪತಿ ನಾಗಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ದಾಂಪತ್ಯ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಕುರಿತಂತೆ ಸಮಂತಾ ಅವರು ಇನ್‍ಸ್ಟಾಗ್ರಾಂನಲ್ಲಿ ಹಾಕಿರುವ ಪೋಸ್ಟ್ ಚಿತ್ರರಂಗದ ಕುತೂಹಲಕಾರಿ ಬೆಳವಣಿಗೆಯಾಗಿದೆ. ಪತಿ ನಾಗಚೈತನ್ಯ ಅವರಿಂದ ದೂರ ಆಗುತ್ತಿರುವುದಾಗಿ ಸಮಂತಾ ಹೇಳಿಕೊಂಡಿದ್ದಾರೆ.
View this post on Instagram
ಕೆಲವು ಸಮಯದ ಹಿಂದೆಯೇ ನಾಗಚೈತನ್ಯ ಹಾಗೂ ಸಮಂತಾ ದಾಂಪತ್ಯದಲ್ಲಿ ಬಿರುಕು ಹಿನ್ನೆಲೆಯಲ್ಲಿ ವಿಚ್ಛೇದನ ಸಾಧ್ಯತೆಗಳ ಬಗ್ಗೆ ಮಾತುಗಳು ಕೇಳಿಬಂದಿದ್ದವು.
ಇಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ ಮಾಹಿತಿ ಹಂಚಿಕೊಂಡಿರುವ ಸಮಂತಾ, ತಾವು ಸತಿ-ಪತಿಯ ಸಂಬಂಧವನ್ನು ಕಡಿದು ಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.