ಬೆಂಗಳೂರು: ತಮ್ಮನ್ನು ಎಐಸಿಸಿ ಹೈಕಮಾಂಡ್ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದೆ ಎಂಬ ಸುದಿ ಕೇವಲ ಊಹಾಪೋಹ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಜೊತೆಗಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹಗಳ ಸುದ್ದಿ ಎಂದಿದ್ದಾರೆ.
.@INCIndia ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು.
ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು.
ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ.
ಇವೆಲ್ಲ ಊಹಾಪೋಹದ ಸುದ್ದಿ.
1/2— Siddaramaiah (@siddaramaiah) October 5, 2021
ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ
ಕಾಂಗ್ರೆಸ್ ನಾಯಕರಾದ @RahulGandhi ಅವರು ಈ ಹಿಂದೆ ಆಹ್ವಾನಿಸಿದಾಗಲೇ
ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ.
2/2— Siddaramaiah (@siddaramaiah) October 5, 2021