ಬೆಂಗಳೂರು: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ ಎಂಬ ಅಚ್ಚರಿಯ ಕರೆಯೊಂದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿನ ಘಟನೆ ಕುರಿತಂತೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವೀಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದಿದ್ದಾರೆ.
An appeal to the masses: whenever you see a BJP leader’s car pass by, just open your phone camera and make a recording.
You never know when they decide to run their car over people and kill them.
Your video will then become evidence. It will be a great service to the country. pic.twitter.com/9rKit00ZzW
— DK Shivakumar (@DKShivakumar) October 7, 2021