ಸಿಂದಗಿ: ಹಾನಗಲ್ ಹಾಗೂ ಸಿಂದಗಿ ವಿದಾನಸಭಾ ಕ್ಷೇತ್ರಗಳ ಉಪಚುನಾವಣೆ ರಾಜ್ಯದ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಅಖಾಡವೆನಿಸಿದೆ. ಮೂರೂ ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು ಮತದಾರರ ಓಲೈಕೆಗೆ ಭಾರೀ ಕಸರತ್ತು ನಡೆಸುತ್ತಿದ್ದಾರೆ.
ಇದೇ ವೇಳೆ, ಸಿದಗಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ್ ಭೂಸನೂರು ಪರವಾಗಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಅವರು ಭರ್ಜರಿ ಪ್ರಚಾರ ನಡೆಸಿದರು.
ಭಾನುವಾರ ಬೈರತಿ ಬಸವರಾಜ ಅವರು ಅಭ್ಯರ್ಥಿ ರಮೇಶ್ ಭೂಸನೂರು ಅವರೊಂದಿಗೆ ಯರಗಲ್ ಗ್ರಾಮದಲ್ಲಿ ಮುಖಂಡರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶದ ಅಡಳಿತ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಸರ್ಕಾರ ರಾಜ್ಯದಲ್ಲಿದೆ. ಸಿಂದಗಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದು ಕರೆ ನೀಡಿದರು.
ಬೈರತಿ ಬಸವರಾಜ ಅವರು ಕಳೆದ ಮೂರು ದಿನಗಳಿಂದ ಸಿಂದಗಿ ತಾಲ್ಲೂಕಿನಾದ್ಯಂತ ಸಂಚರಿಸಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.
ರವಿ ಸಿಂದಗಿ, ಸಿದ್ದು ಬುಲ್ಲಾ ಸೇರಿದಂತೆ ಹಲ ಮುಖಂಡರು ಚುನಾವಣಾ ಪ್ರಚಾರದ ಸಮಯದಲ್ಲಿ ಬೈರತಿ ಬಸವರಾಜ ಮತ್ತು ಅಭ್ಯರ್ಥಿ ರಮೇಶ್ ಭೂಸನೂರು ಅವರಿಗೆ ಸಾಥ್ ನೀಡಿದರು.