ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಇಲ್ಲ ಎಂದು ಬಿಜೆಪಿ ಪ್ರಾಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಆಗ್ರಹಕ್ಕೆ ಅವರು ತಮ್ಮದ ದಾಟಿಯಲ್ಲಿ ಎದಿರೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯರೂ ಆದ ರವಿಕುಮಾರ್, ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದು ಒಂದು ಕ್ಷೇತ್ರದಲ್ಲಿ ಸೋತಿದ್ದರೂ, ಬಿಜೆಪಿಯ ಮತ ಪ್ರಮಾಣ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.