ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಸಹಿತ ದಕ್ಷಿಣದ ರಾಜದಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಜೆಲವು ದಿನಗಳಿಂದ ಮಳೆಯಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ.
ನವೆಂಬರ್ 13 ರವೆರೆಗೆ, 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಮೂರು ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.






















































