ಬೆಂಗಳೂರು: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ರೀಲರ್ ಒಬ್ಬ ದುಂಡಾವರ್ತನೆ ನಡೆಸಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ಹಗಲು ರಾತ್ರಿ ನಿದ್ದೆಗೆಟ್ಟು ಕಷ್ಟದಿಂದ ರೇಷ್ಮೆಗೂಡು ಬೆಳೆದು ತರುವ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗುವುದು ಅಕ್ಷಮ್ಯ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ವೀಡಿಯೋವನ್ನೂ ಹಂಚಿದ್ದಾರೆ.
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ರೀಲರ್ ಒಬ್ಬ ದುಂಡಾವರ್ತನೆ ನಡೆಸಿದ ಘಟನೆ ಖಂಡನೀಯ. ಹಗಲು ರಾತ್ರಿ ನಿದ್ದೆಗೆಟ್ಟು ಕಷ್ಟದಿಂದ ರೇಷ್ಮೆಗೂಡು ಬೆಳೆದು ತರುವ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗುವುದು ಅಕ್ಷಮ್ಯ.1/3 pic.twitter.com/xqxKYqBXbr
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 15, 2022
ದೌರ್ಜನ್ಯ ಎಸಗಿದ ರೀಲರುಗಳ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರಿಗೆ ತಿಳಿಸಿದ್ದೇನೆ. ರೇಷ್ಮೆಗೂಡು ಹರಾಜು ನಡೆಯುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವಂತೆಯೂ ಸೂಚಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ಬಿಗಿಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ ಎಂದವರು ಹೇಳಿದ್ದಾರೆ.
ಹರಾಜು ಸಂದರ್ಭದಲ್ಲಿ ರೇಷ್ಮೆ ಗೂಡನ್ನು ಬೇರ್ಪಡಿಸುವುದು, ಅಕ್ರಮವಾಗಿ ಗೂಡನ್ನು ತೆಗೆದುಕೊಳ್ಳುವುದು, ಕಳ್ಳತನ ಮಾಡುವುದು ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಅನೇಕ ದೂರುಗಳು ಬಂದಿವೆ. ಇಂಥ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವ ಪ್ರಶ್ನೆ ಇಲ್ಲ. 3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 15, 2022
ಹರಾಜು ಸಂದರ್ಭದಲ್ಲಿ ರೇಷ್ಮೆ ಗೂಡನ್ನು ಬೇರ್ಪಡಿಸುವುದು, ಅಕ್ರಮವಾಗಿ ಗೂಡನ್ನು ತೆಗೆದುಕೊಳ್ಳುವುದು, ಕಳ್ಳತನ ಮಾಡುವುದು ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಅನೇಕ ದೂರುಗಳು ಬಂದಿವೆ. ಇಂಥ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವ ಪ್ರಶ್ನೆ ಇಲ್ಲ ಎಂದು ಹೆಚ್ಡಿಕೆ ಆಕ್ರೋಶ ಹೊರಹಾಕಿದ್ದಾರೆ.